ಮೂಲಭೂತ ಸೌಕರ್ಯಗಳಿಗೆ ಆದ್ಯತೆ

ಹರಪನಹಳ್ಳಿ, ನ. 10- ರಾಜ್ಯದ ಪರಿಶಿಷ್ಟ ಜಾತಿ ಪಂಗಡಗಳ ಕಾಲೋನಿಗಳಲ್ಲಿ ಸಿ.ಸಿ. ರಸ್ತೆ ಚರಂಡಿ, ಸಮುದಾಯ ಭವನಗಳು  ಸೇರಿದಂತೆ,  ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು  ಹೇಳಿದರು.

ಹರಪನಹಳ್ಳಿ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದಿಂದ ತಮಗೆ ನೀಡಿದ ಸನ್ಮಾನವನ್ನು ಸ್ವೀಕರಿಸಿ  ಅವರು ಮಾತನಾಡಿದರು. 

ರಾಜ್ಯದ 50 ರಿಂದ 60 ಲಕ್ಷ ದಷ್ಟು ಇರುವ ವಾಲ್ಮೀಕಿ ನಾಯಕ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕು. ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿ  ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗವುದು ಪರಿಶಿಷ್ಟ ಜಾತಿ ಪಂಗಡಗಳ ಜನಸಂಖ್ಯೆ ಇರುವ ಕಡೆ ಇನ್ನು ಹೆಚ್ಚಿನ ವಸತಿ ನಿಲಯಗಳ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದ ಅವರು, ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹರಪನಹಳ್ಳಿ ಪಟ್ಟಣದ ವಾಲ್ಮೀಕಿ ಭವನವನ್ನು ಪೂರ್ಣಗೊಳಿಸಲು ಬೇಕಾಗಿರುವ ಮೊತ್ತವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೋರಿಶೆಟ್ಟಿ ಉಚ್ಚೆಂಗೆಪ್ಪ. ಉಪಾಧ್ಯಕ್ಷ ಟಿ.ಶಿವಾನಂದ್, ಕಾರ್ಯದರ್ಶಿ ಗಿರಜ್ಜಿ ನಾಗರಾಜ್, ತಾಲ್ಲೂಕು ವಾಲ್ಮೀಕಿ ಮಹಿಳಾ ಘಟಕದ ಗೌರವ ಅಧ್ಯಕ್ಷರಾದ ಟಿ.ಪದ್ಮಾವತಿ, ವಕೀಲರಾದ ಟಿ.ಮನೋಜ್, ಸಂಘಟನಾ ಕಾರ್ಯ ದರ್ಶಿಗಳಾದ ಜಿ.ಕೆ.ಬಸವರಾಜ್, ಮಾಳ್ಗಿ ತಿಮ್ಮೇಶ್, ಎಂ. ಆನಂದಪ್ಪ, ಏಕಲವ್ಯ ಸಂಘರ್ಷ ಸಮಿತಿ ಅಧ್ಯಕ್ಷ ರಾಯದುರ್ಗದ ಪ್ರಕಾಶ್, ಮುಖಂಡರಾದ ಟಿ.ಬಿ.ರಾಜು, ತಳವಾರ ಚಂದ್ರಪ್ಪ ಉಪಸ್ಥಿತರಿದ್ದರು.

error: Content is protected !!