ಜಗಳೂರು, ನ.20- ಬರದ ನಾಡಿನ ರೈತರ ಅಭಿವೃದ್ಧಿಗೆ ಸಹಕಾರ ಸಂಘಗಳ ಸಹಕಾರ ಅತಿಮುಖ್ಯವಾಗಿದೆ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದರು.
ತಾಲ್ಲೂಕಿನ ಸಿದ್ಧಿಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಸಹ ಕಾರ ಮಹಾಮಂಡಳಿ, ಜಿಲ್ಲಾ ಸಹಕಾರ ಯೂನಿ ಯನ್, ಶಿವಮೊಗ್ಗ – ದಾವಣಗೆರೆ – ಚಿತ್ರದುರ್ಗ ಸಹಕಾರ ಹಾಲು ಉತ್ಪಾದಕರ ಸಂಘ, ಪಿಕಾರ್ಡ್ ಬ್ಯಾಂಕ್, ಸಿದ್ದಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘ ಹಾಗೂ ವಿವಿಧ ರೀತಿಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಂ ಡಿದ್ದ 67ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಿಗೆ ಸಹಕಾರ ಸಂಘಗಳ ಮೂಲಕ 22 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸಾಲ ಸೌಲಭ್ಯ ನೀಡಲಾಗಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು. ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು ಎಂದು ಸಲಹೆ ನೀಡಿದರು.
ಆರ್ಥಿಕ ಬಿಕ್ಕಟ್ಟು ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ವಿಳಂಬ; ಕೊರೊನಾದಿಂದ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆ ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ವಿಳಂಬವಾಗಿದ್ದು ರೈತರು ಸಹಕರಿಸಬೇಕು. ಮುಂದಿನ ವರ್ಷದ ಆರಂ ಭದಲ್ಲಿ ಸರ್ಕಾರಕ್ಕೆ ಒತ್ತಡ ತರುವ ಮೂಲಕ ಕಾಮ ಗಾರಿಯನ್ನು ಪ್ರಥಮ ಆದ್ಯತೆ ನೀಡಿ ಕೈಗೆತ್ತಿಕೊಳ್ಳ ಲಾಗುವುದು ಎಂದು ಶಾಸಕರು ತಿಳಿಸಿದರು.
ಜಿಲ್ಲಾ ನಿರ್ದೆಶಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ ಮತ್ತು ಲೀಡ್ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ಎನ್.ಟಿ. ಯರಿಸ್ವಾಮಿ ಮಾತನಾಡಿದರು.
ಜಿಲ್ಲಾ ನಿರ್ದೇಶಕ ಮುರುಗೇಶ್ ಮಾತನಾಡಿ, ಸಾಲದ ಸುಳಿಯಲ್ಲಿ ಸಿಲುಕಿ ನಲುಗಿ ಹೋಗಿರುವ ರೈತರ ಬದುಕು ಹಸನಾಗಿಸುವ ದೃಷ್ಠಿಕೋನದಿಂದ ಸಹಕಾರ ಸಂಘಗಳು ಸ್ಥಾಪನೆಯಾಗಿದ್ದು, ಇದೀಗ 6 ಲಕ್ಷ 44 ಸಾವಿರ ಹಳ್ಳಿಗಳು ಸಹಕಾರ ಸಂಘಗಳ ಬ್ಯಾಂಕ್‌ಗಳನ್ನು ಅವಲಂಬಿಸಿವೆ ಎಂದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವೇಣುಗೋಪಾಲ್ ರೆಡ್ಡಿ, ಸಿಇಓ ತಾವರಾ ನಾಯ್ಕ ಸಹಕಾರ ಸಂಘಗಳ ನಿರ್ದೇಶಕರುಗಳಾದ ಧನಂಜಯ್ ರೆಡ್ಡಿ, ಚೌಡಮ್ಮ, ಹನುಮಂತರೆಡ್ಡಿ ತಾಪಂ ಸದಸ್ಯ ತಿಮ್ಮಾಭೋವಿ, ಮಾಜಿ ಜಿಪಂ ಸದಸ್ಯ ಎಸ್.ಕೆ. ರಾಮರೆಡ್ಡಿ, ಪ್ರಕಾಶ್ ರೆಡ್ಡಿ, ಬಿಸ್ತುವಳ್ಳಿ ಬಾಬು, ಡಿಸಿಸಿ ಬ್ಯಾಂಕ್ ಕ್ಷೇತ್ರಿಯ ಅಧಿಕಾರಿ ಹಾಲಸ್ವಾಮಿ, ಕಾರ್ಯದರ್ಶಿ ರಾಮ್ ಡಿ.ಪಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.