ದಾವಣಗೆರೆ, ಡಿ.7- ಇದೇ 22 ರಂದು ನಡೆಯುವ ಗ್ರಾಮ ಪಂಚಾಯ್ತಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಥಮ ದಿನವಾದ ಸೋಮವಾರ ಮೂರು ತಾಲ್ಲೂಕುಗಳಿಂದ 51 ನಾಮ ಪತ್ರಗಳು ಸಲ್ಲಿಕೆಯಾಗಿವೆ.
ಜಗಳೂರು ತಾಲ್ಲೂಕಿನಲ್ಲಿ 16, ಹೊನ್ನಾಳಿ 10 ಹಾಗೂ ದಾವಣಗೆರೆ ತಾಲ್ಲೂಕಿನಲ್ಲಿ 25 ನಾಮಪತ್ರಗಳು ಸಲ್ಲಿಕೆಯಾಗಿವೆ.
ಅಧಿಸೂಚನೆ: ದಾವಣಗೆರೆ, ಜಗಳೂರು ಮತ್ತು ಹೊನ್ನಾಳಿ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅವಧಿ ಪೂರ್ಣಗೊಂಡಿರುವ ಎಲ್ಲಾ ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದೆ. ಡಿ.11 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.12 ನಾಮಪತ್ರಗಳನ್ನು ಪರಿಶೀಲಿ ಸುವ ದಿನ ವಾಗಿದೆ. ಡಿ.14 ಉಮೇದುವಾರಿಕೆಗಳನ್ನು ಹಿಂತೆಗೆದು ಕೊಳ್ಳಲು ಕೊನೆಯ ದಿನವಾಗಿದೆ. ಡಿ.22ರಂದು ಮತದಾನವು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ.
ಅವಧಿ ಪೂರ್ಣಗೊಳ್ಳದ ಗ್ರಾ.ಪಂ ವಿವರ: ದಾವಣಗೆರೆ ತಾಲ್ಲೂಕಿನ ಬೇತೂರು, ಕನಗೊಂಡನಹಳ್ಳಿ, ಕುಕ್ಕುವಾಡ ಮತ್ತು ಮಾಯಕೊಂಡ. ಹೊನ್ನಾಳಿ ತಾಲ್ಲೂಕಿನ ಹೆಚ್. ಕಡದಕಟ್ಟೆ ಈ ಗ್ರಾ.ಪಂ ಗಳು ಅವಧಿ ಪೂರ್ಣಗೊಳ್ಳದ ಕಾರಣ ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.