ಜಗಳೂರು, ಡಿ.10- ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪಟ್ಟಣದಲ್ಲಿ ಪ್ರತ್ಯೇಕವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.
ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಶಾಸಕ ಎಸ್.ವಿ. ರಾಮಚಂದ್ರ, ಮಾಜಿ ಶಾಸಕ ಎಚ್.ಪಿ. ರಾಜೇಶ್, ಕೆ.ಪಿ.ಸಿ.ಸಿ. ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ ಪಾಲಯ್ಯ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು, ದಲಿತ ಸಂಘಟನೆಗಳ ಮುಖಂಡರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು .
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಡಾ. ನಾಗವೇಣಿ, ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕ ಡಿ. ದುರುಗಪ್ಪ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ರಾಜು ಡಿ. ಬಣಕಾರ್, ದಲಿತ ಮುಖಂಡರಾದ ಓಬಣ್ಣ, ಪಲ್ಲಾಗಟ್ಟೆ ಶೇಖರಪ್ಪ, ಹಟ್ಟಿ ತಿಪ್ಪೇಸ್ವಾಮಿ, ನಾಗಲಿಂಗಪ್ಪ. ಚಿಕ್ಕಮ್ಮನ ಹಟ್ಟಿ ದೇವೇಂದ್ರಪ್ಪ, ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಸಿ. ತಿಪ್ಪೇಸ್ವಾಮಿ, ಕಸಾಪ ಅಧ್ಯಕ್ಷ ಹಜರತ್ ಅಲಿ, ತಾ.ಪಂ. ಸದಸ್ಯ ಬಸವರಾಜ್, ಪ.ಪಂ. ಸದಸ್ಯ ಪಾಪಲಿಂಗಪ್ಪ, ವಕೀಲ ಹನುಮಂತಪ್ಪ, ಬಿ. ಸತೀಶ್. ರಾಜಪ್ಪ, ಕುಬೇಂದ್ರಪ್ಪ, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಸಮಾಜಕಲ್ಯಾಣ ಇಲಾಖೆಯ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ ಅಂಬೇಡ್ಕರ್ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಿದರು. ಬಸವರಾಜ್, ಧನ್ಯಕುಮಾರ್, ಮಲ್ಲಿಕಾರ್ಜುನ್, ಗಿರೀಶ್ ಇನ್ನಿತರರಿದ್ದರು.