ಹರಪನಹಳ್ಳಿ, ಆ. 12- ಕೊರೊನಾ ವಾರಿಯರ್ಸ್‌ಗ ಳನ್ನು ಸನ್ಮಾನಿಸಿ, ಗೌರವಿಸುವುದರೊಂದಿಗೆ ಈ ಬಾರಿ ಸರಳ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲು ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್, ಕೋವಿಡ್ ಭೀತಿ ಯಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ವೇದಿಕೆ ಕಾರ್ಯಕ್ರಮ ಮಾತ್ರ ಇರುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ನಡೆಯುವ ಸ್ಟೇಡಿಯಂನಲ್ಲಿ ಆಂಬ್ಯುಲೆನ್ಸ್, ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಪ್ರತಿಯೊಬ್ಬರಿಗೂ ರಾಪಿಡ್ ಆಗಿ ಕೋವಿಡ್ ಪರೀಕ್ಷೆ ಮಾಡಬೇಕು. ಸ್ಯಾನಿಟೈಸರ್ ಹಾಕಬೇಕು, ಮಾಸ್ಕ್ ಕಡ್ಡಾಯವಾಗಿದೆ ಎಂದು ಹೇಳಿದರು.
ಕೊರೊನಾ ವಾರಿಯರ್ಸ್‌ಗಳನ್ನು ಗುರುತಿಸಿ, ಸನ್ಮಾನ ಮಾಡಲು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿ, ತಾ.ಪಂ. ಇಓ, ಪುರಸಭೆ ಮುಖ್ಯಾಧಿಕಾರಿಗಳ ನ್ನೊಳಗೊಂಡ ಸಮಿತಿ ರಚನೆಗೆ ಅವರು ಸೂಚಿಸಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಕರೆಸಿ ಸನ್ಮಾನ ಮಾಡಬೇಕು. ನಿಗದಿತ ಜನರುಳ್ಳ, ಸಾಮಾಜಿಕ ಅಂತರ ಕಾಯ್ದುಕೊಂಡು ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಬೇಕು ಎಂದು ಅವರು ತಿಳಿಸಿದರು.
ತಾ.ಪಂ. ಇಓ ಅನಂತರಾಜು, ಉಪನೋಂದಣಾಧಿ ಕಾರಿ ದೀಪ, ಬಿಇಓ ವೀರಭದ್ರಯ್ಯ, ಬೆಸ್ಕಾಂ ಎಇಇ ಭೀಮಪ್ಪ, ವೈದ್ಯಾಧಿಕಾರಿ ಡಾ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ ಡೊಳ್ಳಿನ, ಪುರಸಭೆ ಮುಖ್ಯಾಧಿಕಾರಿ ನಾಗರಾಜನಾಯ್ಕ, ಮೀನುಗಾರಿಕೆ ಇಲಾಖೆಯ ಮಂಜುಳಾ, ತೋಟಗಾರಿಕೆ ಇಲಾಖೆಯ ಜಯಸಿಂಹ, ಅಗ್ನಿಶಾಮಕ ಇಲಾಖೆ ಅಧಿ ಕಾರಿ ರಾಮಪ್ಪ, ಪುರಸಭಾ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಸೇರಿದಂತೆ ಇತರರು ಹಾಜರಿದ್ದರು.