ಗುಣಮಟ್ಟದ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯವಶ್ಯಕ

ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಕರೆ

ಹರಿಹರ, ಆ.28- ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಸ್ತುತ ದಿನಮಾನಗಳಲ್ಲಿ ಅತ್ಯವಶ್ಯಕವಾಗಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಶ್ರೀ  ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಕರೆ ನೀಡಿದರು. 

ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠದ ಅಂಗ ಸಂಸ್ಥೆ ಎಸ್.ಜೆ.ವಿ.ಪಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಏರ್ಪಾಡಾಗಿದ್ದ ಡಿಜಿಟಲ್ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಜಗದ್ಗುರುಗಳು ಆಶೀರ್ವಚನ ನೀಡಿದರು.

ಕೊಠಡಿಗಳನ್ನು ಉದ್ಘಾಟಿಸಿದ ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ ಮಾತನಾಡಿ,  ಡಿಜಿಟಲ್ ತರಗತಿಗಳ ಸದುಪಯೋಗಪಡಿಸಿಕೊಂಡು ಕಾಲೇಜಿನ ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.

ವಿದ್ಯಾಪೀಠದ ಉಪಾಧ್ಯಕ್ಷ ಡಿ.ಎಂ.ಹಾಲಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಅಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕಾರ್ಯದರ್ಶಿ ಆರ್.ಟಿ. ಪ್ರಶಾಂತ್, ನಿರ್ದೇಶಕರುಗಳಾದ ಎನ್.ಎಂ.ತಿಪ್ಪೇಸ್ವಾಮಿ, ಮೂರ್ಕಲ್ ಜಯಣ್ಣ, ಎಚ್.ಎಂ. ಷಡಕ್ಷರಯ್ಯ, ಎನ್.ಎಚ್.ಪಾಟೀಲ್, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಎಂ. ರುದ್ರಮುನಿಸ್ವಾಮಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎ.ಬಿ.ರಾಮಚಂದ್ರಪ್ಪ, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಎಂ.ಮುರಿಗಿಸ್ವಾಮಿ, ಸಂಸ್ಥೆಯ ವ್ಯವಸ್ಥಾಪಕ ಎಂ.ಆರ್. ವೀರೇಶ್, ವಿದ್ಯಾಪೀಠದ ಹಿತೈಷಿಗಳಾದ ಸಿದ್ದರಾಮಪ್ಪ, ಉಪನ್ಯಾಸಕರುಗಳಾದ ಡಾ. ಎನ್.ಎಂ. ವಾಗೀಶ್, ಆರ್.ಜಿ.ಚಂದ್ರಶೇಖರ ಮಠ, ಶ್ರೀಮತಿ ಸೌಭಾಗ್ಯ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.

error: Content is protected !!