ಜಗಳೂರು ಶಾಸಕ ಎಸ್. ವಿ. ರಾಮಚಂದ್ರ
ಜಗಳೂರು, ಸೆ.17- ಮಹಾಮಾರಿ ಕೋವಿಡ್-19ನ್ನು ಸಮರ್ಥವಾಗಿ ಎದುರಿ ಸುತ್ತಾ ದೇಶವನ್ನು ಮುನ್ನಡೆಸಿ ಭಾರತ ಅಭಿವೃದ್ಧಿ ಪಥದತ್ತ ಸಾಗಲು ಪ್ರಧಾನಿ ಮೋದೀಜಿ ಅವರು ಪ್ರಪಂಚಕ್ಕೆ ಮಾದರಿಯಾಗಿದ್ದಾರೆ. ಎಂದು ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್. ವಿ. ರಾಮಚಂದ್ರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಜಿ 70 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು – ಹಂಪಲು, ಬಡ ಮಕ್ಕಳಿಗೆ ಉಚಿತವಾಗಿ ಪೆನ್ನು ನೋಟ್ ಬುಕ್ಗಳನ್ನು ವಿತರಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ 20 ಲಕ್ಷ ಕೋಟಿ ರೂ. ಅನುದಾನ ನೀಡಿ ದೇಶದ ಕೃಷಿ ಕಾರ್ಮಿಕರಿಗೆ, ಬಡವರಿಗೆ ಸಹಾಯ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೇವೆ ಮತ್ತೊಮ್ಮೆ ದೇಶಕ್ಕೆ ಅಗತ್ಯವಾಗಿದೆ. ಚೀನಾದ ಆಕ್ರಮಣ ತಡೆಗಟ್ಟಿದ ಧೀಮಂತ ನಾಯಕತ್ವದ ಮೋದೀಜಿ ಪ್ರಪಂಚಕ್ಕೆ ಮಾದರಿಯಾಗಿದ್ದಾರೆ ಎಂದರು.
ದೇಶದ ಎಲ್ಲಾ ಸಮಸ್ಯೆಗಳನ್ನು ಹಂತ ಹಂತ ವಾಗಿ ಬಗೆಹರಿಸುವ ಮೂಲಕ ಭಾರತ ಅಭಿವೃದ್ಧಿ ಪಥದತ್ತ ಸಾಗಲು ಅಗತ್ಯವಾದ ಭೂಮಿಕೆ ನಿರ್ಮಾಣ ಮಾಡಿ ಕೊಡುವ ಮೂಲಕ ಕೊಟ್ಯಾಂ ತರ ಜನರ ಪಾಲಿಗೆ ಆಶಾಕಿರಣ ವಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಅವರು ಅಧಿಕಾರಕ್ಕೆ ಬರಲಿ ಎಂದು ಶುಭ ಹಾರೈಸಿದರು.
ಬಿಜೆಪಿ ಮಂಡಲ ಅಧ್ಯ್ಯಕ್ಷ ಹೆಚ್.ಸಿ.ಮಹೇಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಅವರು ಸಂಕಷ್ಟದ ಮಧ್ಯೆ ದೇಶವನ್ನು ಮುನ್ನಡೆಸಿ, ದೇಶಕ್ಕೆ ಕ್ರಿಯಾಶೀಲತೆಯ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ವಿ. ನಾಗಪ್ಪ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದೇಶ್, ವಿ.ಎಸ್.ಎಸ್.ಎನ್ ಅಧ್ಯಕ್ಷ ಬಿಸ್ತುವಳ್ಳಿ ಬಾಬು, ಬಿಜೆಪಿ ಯುವ ಘಟಕದ ಅಧ್ಯಕ್ಷ ಕಿರಣ್, ಪಟ್ಟಣ ಪಂಚಾಯಿತಿ ಸದಸ್ಯರಾದ ಆರ್. ತಿಪ್ಪೇಸ್ವಾಮಿ, ಮಂಜುಳಾ, ನವೀನ್, ಮಂಜಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸವಿತಾ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಾ, ಉಪಾಧ್ಯಕ್ಷೆ ರೇಖಾ, ಗಂಗಮ್ಮ, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕಾಂತರಾಜ್, ಉಪಾಧ್ಯಕ್ಷ ಟಿ.ಅಂಜಿನಪ್ಪ, ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಬಿ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.