ಮೌಲ್ಯ ಆಧಾರಿತ ಶಿಕ್ಷಣದಿಂದ ಉತ್ತಮ ಪ್ರಜೆ ಸಾಧ್ಯ

ಮೌಲ್ಯ ಆಧಾರಿತ ಶಿಕ್ಷಣದಿಂದ ಉತ್ತಮ ಪ್ರಜೆ ಸಾಧ್ಯ

ಮೇಗಳಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಹಾವೇರಿಯ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ

ಹರಪನಹಳ್ಳಿ, ಜ.23- ಸರ್ಕಾರಿ ಶಾಲೆಗಳಲ್ಲಿ ಕಲಿತವರು ಇಂದು ಉನ್ನತ ಉದ್ಯೋಗದಲ್ಲಿದ್ದಾರೆ ಎಂದು  ಹಾವೇರಿಯ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು.

ಪಟ್ಟಣದ  ಮೇಗಳಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ  2ನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು  ಮಾತನಾಡಿದರು.

ಶಿಕ್ಷೆ ಇದ್ದಲ್ಲಿ ಶಿಕ್ಷಣ. ಶಾಲೆಯಲ್ಲಿ ಮೌಲ್ಯ ಆಧಾರಿತ ಶಿಕ್ಷಣವನ್ನು ನೀಡಿದಲ್ಲಿ ಆ ವಿದ್ಯಾರ್ಥಿ ಉತ್ತಮ ಪ್ರಜೆಯಾಗುತ್ತಾನೆ. ಶಿಕ್ಷಣದಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ. ಖಾಸಗಿ ಶಾಲೆಗಳ ಭರಾಟೆಯಲ್ಲಿ ಮೇಗಳಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೂರು ವಸಂತಗಳನ್ನು ದಾಟಿದೆ ಎಂದರೆ ಶಿಕ್ಷಣದ ಗುಣಮಟ್ಟ ಚೆನ್ನಾಗಿ ಇದೆ ಎಂದು ಅರ್ಥವಾಗುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹೈದ್ರಾಬಾದ್-ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ ಅವರು  371ಜೆ ಹಾಗೂ ಹೊಸ ಶಿಕ್ಷಣ ನೀತಿ ಕುರಿತು ಮಾತನಾಡಿ,  ಸಂವಿಧಾನದ 371ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ತಾಲ್ಲೂಕುಗಳು ಇನ್ನು ಅಭಿವೃದ್ಧಿ ಕಾಣದೆ ಹಿಂದುಳಿದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಲ್ಯಾಣ ಕರ್ನಾಟಕದ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ನಿವೃತ್ತ ಅಭಿಯಂತರ ಎಚ್.ಎಂ. ಮಲ್ಲಿಕಾರ್ಜುನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಐವತ್ತು ವರ್ಷಗಳ ಹಿಂದೆ ನಾನು ಶಿಕ್ಷಣ ಕಲಿತ ಶಾಲೆ ಇಂದು ಶತಮಾನೋತ್ಸವ   ಆಚರಿಸಿಕೊಳ್ಳುತ್ತಿರುವುದು ಸಂತಸ ತಂದಿದೆ.  ಕೌಶಲ್ಯ ಆಧಾರಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮಕ್ಕಳಿಗೆ ಕಲಿಯಲು ತೊಂದರೆಯಾಗುವುದು. ಆದರೂ ಕೂಡ ಶಿಕ್ಷಕರು ತರಬೇತಿ ಪಡೆದು ಉತ್ತಮ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತ ರಾಜ್ಯ ಅಧ್ಯಕ್ಷ ಜಿ. ನಂಜನಗೌಡ, ತೆಗ್ಗಿನ ಮಠದ ಕಾರ್ಯದರ್ಶಿ ಟಿ.ಎಂ. ಚಂದ್ರಶೇಖರಯ್ಯ, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ,  ವೀರಶೈವ ಲಿಂಗಾಯತ ಪಂಚಮ ಸಾಲಿ ಸಮಾಜದ ಅಧ್ಯಕ್ಷ ಪಿ. ಬೆಟ್ಟನಗೌಡ,  ಡಾ. ಕೆ.ಎಂ. ಮಂಜುನಾಥ, ನ್ಯಾಯವಾದಿ ಪಿ. ಜಗದೀಶಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಬಸವರಾಜ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜಿ.ಪದ್ಮಲತ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಸಿದ್ದಲಿಂಗನಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ತಾಲ್ಲೂಕು ಅಧ್ಯಕ್ಷ ಕೆ. ಮಂಜುನಾಥ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎ.ಎಂ. ರೇಣುಕಾರಾಧ್ಯ, ಶತಮಾ ನೋತ್ಸವ ಸಮಿತಿ ಅಧ್ಯಕ್ಷ ಪಾರಸ್‌ಮಲ್ ಜೈನ್, ಉಪಾಧ್ಯಕ್ಷರಾದ ಚನ್ನವೀರಸ್ವಾಮಿ, ಪಿ.ಬಿ.ಗೌಡ, ಆಹಾರ ಸಮಿತಿ ಅಧ್ಯಕ್ಷ ಹುರಳಿ ಕೊಟ್ರಪ್ಪ, ಸ್ವಾಗತ ಸಮಿತಿ ಅಧ್ಯಕ್ಷ ಸಿ.ಎಂ.ಕೊಟ್ರಯ್ಯ, ಪದಾಧಿಕಾರಿಗಳಾದ ಎ.ಎಸ್.ಎಂ ಗುರುಪ್ರಸಾದ್, ಸಂಕಪ್ಪನವರ ಕೊಟ್ರೇಶ್, ಎಚ್.ಎಂ.ಜಗದೀಶ್,  ವರ್ತಕ ಧನರಾಜ್  ಸೇರಿದಂತೆ, ಇತರರು ಇದ್ದರು.

error: Content is protected !!