ದಾವಣಗೆರೆ, ಜ. 25 – ಸರ್ಕಾರ ಈ ಹಿಂದೆಯೇ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ತೀರ್ಮಾನಿಸಿತ್ತು. ಆದರೆ ಕೋವಿಡ್ ಕಾರಣದಿಂದ ಇದುವರೆಗೂ ನಡೆಯಲಾಗಿರುವುದಿಲ್ಲ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಣಯ ಕೈಗೊಳ್ಳಲಾಗಿತ್ತು. ಇತ್ತೀಚಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದಾವಣಗೆರೆಗೆ ಆಗಮಿಸಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಅವರು ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಬೇಕು. ಅದಕ್ಕೆ ಪೂರಕವಾದ ಅನುದಾನ ವನ್ನು ಸರ್ಕಾರ ಮುಂಗಡ ಪತ್ರದಲ್ಲಿ ಮೀಸಲಿಡುವಂತೆ ಸರ್ಕಾರದೊಂದಿಗೆ ತಾವುಗಳು ಮಾತನಾಡಿ, ಒತ್ತಾಯ ಹೇರಬೇಕಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಸಂಘಟನಾ ಕಾರ್ಯದರ್ಶಿ ಜಿ.ರುದ್ರಯ್ಯ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಜಿ ಜಗದೀಶ್ ಕೂಲಂಬಿ, ಜಿಲ್ಲಾ ಪದಾಧಿಕಾರಿ ಶ್ರೀಮತಿ ರುದ್ರಾಕ್ಷಿಬಾಯಿ, ತಾಲ್ಲೂಕು ಕಸಾಪ ಅಧ್ಯಕ್ಷೆ ಶ್ರೀಮತಿ ಸುಮತಿ ಜಯಪ್ಪ, ತಾಲ್ಲೂಕು ಪದಾಧಿಕಾರಿಗಳಾದ ಬೇತೂರು ಷಡಕ್ಷರಪ್ಪ, ಆರ್, ಶಿವಕುಮಾರ್, ಸದಾನಂದ ಕುಂಬಳೂರು ಮತ್ತಿತರರು ಉಪಸ್ಥಿತರಿದ್ದರು.