ಕೊಟ್ಟೂರು, ಜ. 29 – ಸರ್ಕಾರದ ಕನಿಷ್ಠ ಬೆಂಬಲ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗ ದೊಂದಿಗೆ ಕೊಟ್ಟೂ ರಿನ ಎಪಿಎಂಸಿ ಪ್ರಾಂಗಣದಲ್ಲಿ ರಾಗಿ ಖರೀದಿ ಕೇಂದ್ರವನ್ನು ಹಗರಿಬೊಮ್ಮನಹಳ್ಳಿ ಶಾಸಕ ಎಸ್.ಭೀಮಾನಾಯ್ಕ್ ಉದ್ಘಾಟಿಸಿದರು.
ನಂತರ ಶಾಸಕರು ಮಾತನಾಡಿ, ಸರ್ಕಾರದ ಆದೇಶದಂತೆ ಕಳೆದ ತಿಂಗಳು ರೈತರಿಂದ ನೇರವಾಗಿ ಖರೀದಿಸುವ ಈ ಯೋಜನೆಗೆ ಡಿಸೆಂಬರ್ ನಲ್ಲಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಅದರಂತೆ ಸುಮಾರು 2963 ರೈತರು 53352 ಕ್ವಿಂಟಾಲ್ ರಾಗಿಯನ್ನು ನೋಂದಾಯಿಸಿದ್ದಾರೆ. ಸರ್ಕಾರವು 3578 ರೂಪಾಯಿಗಳನ್ನು ಬೆಂಬಲ ಬೆಲೆಯನ್ನು ಘೋಷಿಸಿದ್ದು, ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಎಲ್ಲಾ ನೋಡಲ್ ಅಧಿಕಾರಿ ಜಿ.ಕೆ.ವೆಂಕಟೇಶ್, ಎಪಿಎಂಸಿ ಕಾರ್ಯದರ್ಶಿ ಎ.ಕೆ.ವೀರಣ್ಣ, ಅಧ್ಯಕ್ಷ ಉಮೇಶ್ ಪೂಜಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದ್ವಾರಕೀಶ್, ಮುಖಂಡ ಅಡಿಕೆ ಮಂಜುನಾಥ್, ವ್ಯವಸ್ಥಾಪಕ ಸಂಗಮೇಶ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.