ಮಲೇಬೆನ್ನೂರು, ಜ. 29- ಯಲವಟ್ಟಿ ಗ್ರಾಮ ದಲ್ಲಿ ಕಳೆದ ವರ್ಷ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಾಗಾದ ಕುಟುಂಬದವರಿಗೆ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಲಾ 10 ಸಾವಿರ ರೂ.ಗಳ ಚೆಕ್ ಅನ್ನು ಶುಕ್ರವಾರ ಯೋಜನೆಯ ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ ವಿತರಿಸಿದರು.
ಗ್ರಾಮದ ಹಿರಿಯರಾದ ಡಿ. ಯೋಮಕೇಶ್ವರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಜಿ. ಆಂಜನೇಯ, ಡಿಸಿಸಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಜಿಗಳಿ ವಲಯದ ಮೇಲ್ವಿಚಾರಕಿ ಶ್ರೀಮತಿ ಪದ್ಮಾವತಿ, ಸೇವಾ ಪ್ರತಿನಿಧಿ ಮಮತಾ ಹಾಗೂ ಸ್ವಸಹಾಯ ಸಂಘದ ಸದಸ್ಯರು ಈ ವೇಳೆ ಹಾಜರಿದ್ದರು.