ಮಲೇಬೆನ್ನೂರು, ಜ.29- ಹೊಳೆಸಿರಿಗೆರೆ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಯಲ್ಲಿ ಹರಿಹರ ತಾಲ್ಲೂಕು ಸಮಾಜ ವಿಜ್ಞಾನ ಕ್ಲಬ್ ವತಿಯಿಂದ ಗುರುವಾರ ಸಮಾಜ ವಿಜ್ಞಾನ ಶಿಕ್ಷಕರಿಗೆ ಹತ್ತನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವಿನ್ಯಾಸ ಹಾಗೂ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಜಿ. ಪರಮೇಶ್ವರಗೌಡ ಅವರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಿಗಿಂತ ಮಹತ್ವದ್ದು. ದೇಶದ ಪ್ರಜೆಗಳನ್ನು ಪ್ರಜ್ಞಾವಂತರನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ತಿಳಿಸಿದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಗಂಗಾಧರ ಪೂಜಾರ್ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆ.ಆರ್. ವಿಶ್ವನಾಥ್, ಕುಬೇಂ ದ್ರಪ್ಪ ಮೆಕ್ಕಪ್ಪನವರ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಿ.ಎಸ್. ನಾಗರಾಜ, ಗೋವಿಂದನಾಯ್ಕ್, ಶ್ರೀಮತಿ ಶುಭ ಪಾಟೀಲ್ ಹಾಗೂ ಶ್ರೀಮತಿ ಮಮತ ಕಾರ್ಯನಿರ್ವಹಿಸಿದರು. ಹೊಳೆಸಿರಿಗೆರೆ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಬೂಬ್ ಬಾಷ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜ ವಿಜ್ಞಾನ ಕ್ಲಬ್‌ನ ಕಾರ್ಯ ದರ್ಶಿ ಗಿರೀಶ್ ಗಂಟೇರ ಉಪಸ್ಥಿತರಿದ್ದರು. ಶಿಕ್ಷಕ ಹೆಚ್.ಆರ್. ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.