ಹರಿಹರ, ಜ.31- ಜೆಡಿಎಸ್‌ನ ಪಂಚರತ್ನ ರಥಯಾತ್ರೆಯು ಹರಿಹರ ಕ್ಷೇತ್ರದ ಕೊಂಡಜ್ಜಿಗೆ ಆಗಮಿಸಿದಾಗ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ದಿ.ಕೊಂಡಜ್ಜಿ ಬಸಪ್ಪ ಅವರ ಪುತ್ಥಳಿಗೆ ಪುಷ್ಪ ಮಾಲೆ ಅರ್ಪಿಸಿದರು. ನಂತರ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು.
ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್. ಶಿವಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಹೆಚ್ ಎಂ ರಮೇಶ್ ಗೌಡ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.