ದಾವಣಗೆರೆ, ಫೆ. 1- ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ನಗರದ ಪ್ರಿಯದರ್ಶಿನಿ ಮಂಗಳ ಕಾರ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಮಹಾರಾಷ್ಟ್ರದ ಕನ್ನಡ ಬಳಗ, ಕನ್ನಡ ಸಾಹಿತ್ಯ ಪರಿಷತ್ ಮಹಾರಾಷ್ಟ್ರ ಘಟಕ ದ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಗಡಿನಾಡು ಕನ್ನಡ ಜಾಗೃತಿ ಸಾಂಸ್ಕೃತಿಕ ಉತ್ಸವದಲ್ಲಿ ನಗರದ ನಮನ ಅಕಾಡೆಮಿಯ ವಿದುಷಿ ಶ್ರೀಮತಿ ಡಿ.ಕೆ. ಮಾಧವಿ ನೇತೃತ್ವದಲ್ಲಿ ನೃತ್ಯ ವೈವಿಧ್ಯ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
January 19, 2025