ದಾವಣಗೆರೆ, ಫೆ.16- ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಯನಗರ `ಸಿ’ ಬ್ಲಾಕ್ ಕದಂಬ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ಯಾಂಡಲ್ ಬೆಳಗಿಸುವ ಮೂಲಕ ಹುತಾತ್ಮ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು. ನಿವೃತ್ತ ಉಪನ್ಯಾಸಕ ಬಿಕ್ಕೂಜಪ್ಪ ಮಾತನಾಡಿ, ದೇಶಕ್ಕಾಗಿ ಹೋರಾಡುವ ಸೈನಿಕರನ್ನು ಗೌರವಿಸಬೇಕು. ಅವರ ಕುಟುಂಬ ವರ್ಗಕ್ಕೆ ಇನ್ನೂ ಹೆಚ್ಚಿನ ರೀತಿಯ ಸಹಕಾರದ ಅಗತ್ಯವಿದೆ ಎಂದು ಹೇಳಿದರು. ಅಧ್ಯಕ್ಷ ಅಂಜನಪ್ಪ ಮಾತನಾಡಿ, ಯುವಕರು ಹೆಚ್ಚಿನ ರೀತಿಯಲ್ಲಿ ಸೈನ್ಯ ಸೇರಿ ದೇಶ ರಕ್ಷಣೆಗೆ ಕಂಕಣಬದ್ಧರಾಗುವಂತೆ ಕರೆ ನೀಡಿದರು. ಪಿ.ಎಸ್. ನಾಗರಾಜ್, ಸುರೇಶ್ ಹೆಚ್. ಇತರರು ಈ ಸಂದರ್ಭದಲ್ಲಿದ್ದರು.
January 19, 2025