ದಾವಣಗೆರೆ, ಫೆ.19- ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಇತ್ತೀಚೆಗೆ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಗರದ ಜಿಎಂಐಟಿ ಕಾಲೇಜಿನ ಕ್ರೀಡಾಪಟುಗಳಾದ ಹೆಚ್.ಬಿ. ಹರ್ಷಿತಾ 69 ಕೆ.ಜಿ. ವಿಭಾಗದಲ್ಲಿ ತೃತೀಯ ಮತ್ತು ಎಸ್.ವಿನಾಯಕ 59 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕರು ಅಭಿನಂದಿಸಿದ್ದಾರೆ.
January 23, 2025