ಎಂ.ಎಂ. ಶಿಕ್ಷಣ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಎಂ.ಎಂ. ಶಿಕ್ಷಣ ಕಾಲೇಜಿನಲ್ಲಿ  ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ದಾವಣಗೆರೆ, ಫೆ. 22 – ನಗರದ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾ ವಿದ್ಯಾಲಯದಲ್ಲಿ 1997ನೇ ಸಾಲಿನ ಪ್ರಶಿಕ್ಷಣಾರ್ಥಿಗಳಿಂದ ಗುರು ವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

25 ವರ್ಷಗಳ ನಂತರ ಕಾಲೇಜಿನ 50ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ತಮ್ಮ ಕಾಲದಲ್ಲಿ ಬೋಧನೆ ಮಾಡಿದ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಗೌರವಿಸಿ ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳ ಜೊತೆ ಕುಟುಂಬದ ಸದಸ್ಯರೂ ಸಹ ಆಗಮಿಸಿ ಸಂಭ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ.ಎಂ. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ಟಿ. ನಾಗರಾಜ ನಾಯ್ಡು ವಹಿಸಿಕೊಂಡಿದ್ದರು.

ಎಂ.ಎಂ.ಎಂ. ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಎಸ್.ಬಿ. ರಂಗನಾಥ್, ಪ್ರೊ. ವೈ.ಎಂ. ವಿಠ್ಠಲರಾವ್, ಡಾ.ಹೆಚ್.ವಿ. ವಾಮದೇವಪ್ಪ, ವಿಶ್ರಾಂತ ಉಪನ್ಯಾಸಕ ಪ್ರೊ. ಜಿ.ಎಸ್. ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಭವಾನಿ ಪ್ರಾರ್ಥಿಸಿದರೆ, ಲಕ್ಷ್ಮಿಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೇಶ್ ಅಂಬಳಿ ನಿರೂಪಿಸಿದರು.

error: Content is protected !!