ದಾವಣಗೆರೆ, ಫೆ. 28 – ನಗರದ ಜಿಲ್ಲಾ ಗುರುಭವನದಲ್ಲಿ ನಡೆದ ಜಿಲ್ಲಾ ಬಡ್ತಿ ಮುಖ್ಯ ಶಿಕ್ಷಕರ ಜಿಲ್ಲಾ ಮಟ್ಟದ ಸಮಗ್ರ ಶಿಕ್ಷಣ ಕರ್ನಾಟಕ ಶೈಕ್ಷಣಿಕ ಕಾರ್ಯಾಗಾರವನ್ನು ಡಯಟ್ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಅವರು ಉದ್ಘಾಟಿಸಿದರು. ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ .ರಂಗಸ್ವಾಮಿ, ಕಾರ್ಯದರ್ಶಿ ವೆಂಕಟೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ರಾಮಪ್ಪ, ಕಾರ್ಯದರ್ಶಿ ಜಗದೀಶ್ ಕಾಶಿಪುರ ಉಪಸ್ಥಿತರಿದ್ದರು. ಸಮಗ್ರ ಶಿಕ್ಷಣ ಕರ್ನಾಟಕದ ಬಗ್ಗೆ ಉಪನ್ಯಾಸಕ ಲೇಪಾಕ್ಷಪ್ಪ ಉಪನ್ಯಾಸ ನೀಡಿದರು.
ಜಿಲ್ಲಾ ಮಟ್ಟದ ಸಮಗ್ರ ಶಿಕ್ಷಣ ಕರ್ನಾಟಕ ಶೈಕ್ಷಣಿಕ ಕಾರ್ಯಾಗಾರ
