ದಾವಣಗೆರೆ, ಮಾ.6- ತಾಲ್ಲೂಕಿನ ಶ್ರೀಕ್ಷೇತ್ರ ಕಡಲಬಾಳು ಗ್ರಾಮದ ಶ್ರೀ ನಾಗಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲಯದ 5ನೇ ವರ್ಷದ ವಾರ್ಷಿಕೋತ್ಸವ ಇತ್ತೀಚೆಗೆ ಕಾರ್ಯಕ್ರಮಗಳೊಂದಿಗೆ ಸುಸಂಪನ್ನಗೊಂಡಿತು. ಶ್ರೀ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ವಿಷ್ಣುತೀರ್ಥ ಪೀಠದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಪ್ರಸನ್ನತೀರ್ಥ ಮಹಾಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ನಾಗಸುಬ್ರಹ್ಮಣ್ಯ ದೇವಳದ ವಾರ್ಷಿಕೋತ್ಸವ
