ಚಳ್ಳಕೆರೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಚಳ್ಳಕೆರೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಚಳ್ಳಕೆರೆ, ಮಾ. 6- ಇಲ್ಲಿನ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ  ಆಚರಿಸಲಾಯಿತು.

ನಂತರ ನಗರದಲ್ಲಿ ಜಯಣ್ಣ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ನಗರದಲ್ಲಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಎಸ್.ಬಿ. ತಿಪ್ಪೇಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ತಿಪ್ಪೀರಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ರಾಜು ಹಾಗೂ ಕಾಲೇಜಿನ ಉಪನ್ಯಾಸಕರಾದ ರೇಖಾ, ಸುಮಾ ಹಾಗೂ ಆರೋಗ್ಯ ಇಲಾಖೆಯ ಪ್ರಾಥಮಿಕ ಸುರಕ್ಷಾ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷ ಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

error: Content is protected !!