ಪವರ್ ಲಿಫ್ಟಿಂಗ್‌ನಲ್ಲಿ ಸುಕೃತಾ ಪ್ರಥಮ

ಪವರ್ ಲಿಫ್ಟಿಂಗ್‌ನಲ್ಲಿ ಸುಕೃತಾ ಪ್ರಥಮ

ದಾವಣಗೆರೆ, ಮಾ.7- ಉತ್ತರ ಕನ್ನಡ ಜಿಲ್ಲೆ ಕುಮುಟಾದ ಟೌನ್‌ಹಾಲ್‌ನಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಷಿಯೇಷನ್  ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಬ್ ಜ್ಯೂನಿಯರ್ ಪವರ್ ಲಿಫ್ಟಿಂಗ್ ಸ್ಪರ್ಧೆಯ 76 ಕೆಜಿ ವಿಭಾಗದಲ್ಲಿ ನಗರದ ಶ್ರೀ ಸೋಮೇಶ್ವರ ವಿದ್ಯಾಲಯದ ವಿದ್ಯಾರ್ಥಿನಿ ಸುಕೃತಾ ಜಿ.ಆರ್ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಂ ಸುರೇಶ್ ಹಾಗೂ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು ಸೇರಿದಂತೆ ಶಿಕ್ಷಕ ವೃಂದದವರು ಶುಭ ಕೋರಿ ಅಭಿನಂದಿಸಿದ್ದಾರೆ.

error: Content is protected !!