ದಾವಣಗೆರೆ, ಮಾ. 10- ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ಇಂದಿನಿಂದ 3 ದಿನಗಳವರೆಗೆ ಕಾಲೇಜಿನ ಮೈದಾನದಲ್ಲಿ ಬಾಪೂಜಿ ವಿದ್ಯಾಸಂಸ್ಥೆ ವ್ಯಾಪ್ತಿಯ ಕಾಲೇಜುಗಳ `ಎಸ್ಸೆಸ್ಸೆಮ್ ಟ್ರೋಫಿ- ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ವಿವಿಧ ಕಾಲೇಜುಗಳ 17 ತಂಡಗಳು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಗಳು ಮನುಷ್ಯನ ಮನಸ್ಸನ್ನು ತಿಳಿಗೊಳಿಸಿ ಸಂತೋಷ ಉಂಟು ಮಾಡುತ್ತವೆ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವ ಮೂಲಕ ಲಾಭ ಪಡೆಯುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ಹೆಚ್.ಬಿ. ಅರವಿಂದ್ ಅಧ್ಯಕ್ಷತೆ ವಹಿಸಿದ್ದರು. ಎ.ವಿ.ಕೆ. ಕಾಲೇಜಿನ ಪ್ರಾಚಾರ್ಯ ಡಾ.ಬಿ.ಪಿ. ಕುಮಾರ್, ಬಿಐಇಟಿ ನಿರ್ದೇಶಕ ಪ್ರೊ. ವೈ. ವೃಷಭೇಂದ್ರಪ್ಪ, ಸಾರ್ವಜನಿಕ ಸಂಪರ್ಕ ಡೀನ್ ಡಾ.ಜಿ.ಪಿ. ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.