ಬಿಜೆಪಿ ಯುವ ಮೋರ್ಚಾದಿಂದ ಬೈಕ್ ರ್‍ಯಾಲಿ

ಬಿಜೆಪಿ ಯುವ ಮೋರ್ಚಾದಿಂದ ಬೈಕ್ ರ್‍ಯಾಲಿ

ದಾವಣಗೆರೆ, ಮಾ.20 – ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ದಿನಾಂಕ 25 ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಸೋಮವಾರ ನಗರದ ವೆಂಕಟೇಶ್ವರ ವೃತ್ತದಿಂದ ಸಮಾವೇಶ ನಡೆಯಲಿರುವ ಜಿಎಂಐಟಿ ಕಾಲೇಜಿನ ಬಳಿ ಇರುವ ಮೈದಾನದವರೆಗೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು. ರ್‍ಯಾಲಿಗೆ ಲೋಕಸಭಾ ಸದಸ್ಯ ಜಿ.ಎಂ ಸಿದ್ದೇಶ್ವರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಬಿಜೆಪಿಯಿಂದ ಇದೇ ದಿನಾಂಕ 25ರಂದು ಐತಿಹಾಸಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಮಾವೇಶ ಯಶಸ್ವಿಗೊಳಿಸಬೇಕೆಂದರು.

ಬೈಕ್ ರ್‍ಯಾಲಿಯಲ್ಲಿ ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್ ಶಿವಪ್ರಕಾಶ್, ಪಾಲಿಕೆ ಸದಸ್ಯ ಕೆ.ಎಂ ವೀರೇಶ್, ಶಿವನಗೌಡ ಪಾಟೀಲ್‌, ಜಿ.ಯಲ್ಲೇಶ್, ಕಿರಣ್‌, ವಿಜಯ್‌ ಸಾವಂತ್‌, ಪಿ.ಸಿ ಶ್ರೀನಿವಾಸ್‌, ಟಿಂಕರ್‌ ಮಂಜಣ್ಣ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!