ದಾವಣಗೆರೆ, ಮಾ.24- ಮಹಾಸಂಗಮ ಸಮಾವೇಶದ ಅಂತಿಮ ಹಂತದ ಸಿದ್ಧತೆಯನ್ನು ಬಿಜೆಪಿ ನಾಯಕರು ಇಂದು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ, ನಾಳಿನ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ, ಶೋಭ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ ಅವರೂ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ, ಮಧ್ಯಾಹ್ನ 1.30ರಿಂದ ಸಭಾ ಕಾರ್ಯಕ್ರಮ ಆರಂಭವಾಗಲಿದೆ. ರಾಜ್ಯದ 52 ಸಾವಿರಕ್ಕೂ ಹೆಚ್ಚು ಬೂತ್‌ಗಳಿಂದ ಕಾರ್ಯಕರ್ತರು ಬರಲಿದ್ದಾರೆ ಎಂದರು. ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಪರಿಷತ್ ಸದಸ್ಯ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಮುಖಂಡರಾದ ಬಸವರಾಜ ನಾಯ್ಕ, ರಾಜನಹಳ್ಳಿ ಶಿವಕುಮಾರ್, ಯಶವಂತರಾವ್ ಜಾಧವ್, ಬಿ.ಜಿ. ಅಜಯ್ ಕುಮಾರ್, ಅನಿತ್ ಮತ್ತಿತರರು ಉಪಸ್ಥಿತರಿದ್ದರು.