ಹಿಮೊಫಿಲಿಯಾ ಸೊಸೈಟಿಯಲ್ಲಿ ಮಹಿಳಾ ದಿನಾಚರಣೆ, ಸಾಧಕಿಗೆ ಸನ್ಮಾನ

ಹಿಮೊಫಿಲಿಯಾ ಸೊಸೈಟಿಯಲ್ಲಿ  ಮಹಿಳಾ ದಿನಾಚರಣೆ, ಸಾಧಕಿಗೆ ಸನ್ಮಾನ

ದಾವಣಗೆರೆ, ಮಾ. 28- ನಗರದ ಕರ್ನಾಟಕ ಹಿಮೊಫಿಲಿಯಾ ಸೊಸೈಟಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಇಂದು ಆಚರಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಅಧಿಕ ವರ್ಷ ಸೇವೆ ಸಲ್ಲಿಸಿದ ಶ್ರೀಮತಿ ದೇವೀರಮ್ಮ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು. 

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಹಿಮೊಫಿಲಿಯಾ ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀಮತಿ ಕಿರುವಾಡಿ ಗಿರಿಜಮ್ಮ ಅವರು, ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸ್ಮರಿಸುತ್ತಾ, ಕಾರ್ಯ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹಿಸುವುದಾಗಿ ತಿಳಿಸಿದರು. 

ನಿವೃತ್ತ ಶಿಕ್ಷಕರಾದ ಶ್ರೀಮತಿ ಡಿ.ಎಂ.ಸರೋಜಿನಿ ಕಾರ್ಯಕ್ರಮ ಉದ್ಘಾಟಿಸಿ, ಸಂಸ್ಥೆಯು ನಗರದಲ್ಲಿ ಒಳ್ಳೆಯ ಸೇವೆಯನ್ನು ರೋಗಿಗಳಿಗೆ ಸಲ್ಲಿಸುತ್ತಿರುವುದಾಗಿ ಪ್ರಶಂಸಿಸಿದರು.  ಸಂಸ್ಥೆಯ ಅಧ್ಯಕ್ಷ ಡಾ. ಸುರೇಶ್ ಹನಗವಾಡಿ ಮಾತನಾಡಿ, ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿರುವುದು ದಾನಿಗಳ ಸಹಕಾರದಿಂದ ಎಂದು ನೆನೆದು ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಸಂಸ್ಥೆಯ ಮಹಿಳಾ ವಿಭಾಗದ ಅಧ್ಯಕ್ಷರಾದ ಡಾ. ಮೀರಾ ಹನಗವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಯಶೋಧ ನಿರೂಪಿಸಿದರು. ರೇಣುಕಾ ವಂದಿಸಿದರು.  

error: Content is protected !!