ಪುನೀತ್ ಜನಮಾನಸದಲ್ಲಿ ಶಾಶ್ವತ

ಪುನೀತ್ ಜನಮಾನಸದಲ್ಲಿ  ಶಾಶ್ವತ

ದಾವಣಗೆರೆ, ಏ.3- ಚಿಕ್ಕ ವಯಸ್ಸಿನಲ್ಲಿಯೇ ಕಲಾಸೇವೆಗೆ ಪ್ರವೇಶಿಸಿ ಜನ ಮಾನಸದಲ್ಲಿ ಅಚ್ಚಳಿಯದೇ ಉಳಿಯುವ ಜೊತೆಗೆ, ಅನೇಕರಿಗೆ ಸಮಾಜ ಸೇವೆಯ ಮೂಲಕ ಶಾಶ್ವತ ಬದುಕು ಕಟ್ಟಿಕೊಟ್ಟ ಚೇತನ ನಟ ಪುನೀತ್ ರಾಜ್‌ಕುಮಾರ್ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಕಾರ್ಯದರ್ಶಿ ಎಂ.ಗುರುಸಿದ್ಧಸ್ವಾಮಿ ತಿಳಿಸಿದರು.

ಶುಕ್ರವಾರ ಆವರಗೆರೆಯ ಡಾ.ಪುನೀತ್‌ ರಾಜ್‍ಕುಮಾರ್ ಅಭಿಮಾನಿ ಬಳಗದಿಂದ ಶ್ರೀ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ದಿ|| ಪುನೀತ್‌ ರಾಜ್‍ಕುಮಾರ್ ಹುಟ್ಟು ಹಬ್ಬದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪುನೀತ್ ರಾಜಕುಮಾರ್ ತನ್ನ ದುಡಿಮೆಯ ಒಂದಿಷ್ಟು ಭಾಗವನ್ನು ಸಮಾಜ ಸೇವೆಗೆ ಮೀಸಲಿಟ್ಟು, ಶಿಕ್ಷಣ, ಆರೋಗ್ಯ, ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಕಾರಣಕ್ಕಾಗಿಯೇ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದು, ಪುನೀತ್ ರಾಜ್‌ಕುಮಾರ್‌ ಅವರ ಲಕ್ಷಾಂತರ ಅಭಿಮಾನಿಗಳು ಹಾಗೂ ಸಂಘಟನೆಗಳು ಅವರ ಆದರ್ಶ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲ್ಯಾಘನೀಯ ಎಂದರು.

ಈ ವೇಳೆ ದಿ.ಡಾ.ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ಬಸವರಾಜು ಮತ್ತು ತಂಡದವರು ಶ್ರೀ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ರೂ.12000 ಮೌಲ್ಯದ ಊಟದ ತಟ್ಟೆಗಳನ್ನು ವಿತರಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಟಿ.ಶೇಖರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಸುರೇಶ್ ಹುಲ್ಲತ್ತಿ, ಶ್ರೀಮತಿ ಲಕ್ಷ್ಮಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

error: Content is protected !!