ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಆಯ್ಕೆ

ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಆಯ್ಕೆ

ದಾವಣಗೆರೆ, ಏ. 9- ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್‌ಟೈಲ್ ಮಷಿನರಿ ಪ್ರೈವೇಟ್ ಲಿ. ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟಿಮನಿ ತಿಳಿಸಿದ್ದಾರೆ.

ಜಿಎಂಐಟಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮತ್ತು ಅಂತಿಮ ವರ್ಷದ ವಿವಿಧ ಕಾಲೇಜಿನ ಡಿಪ್ಲೋಮಾ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಈ ಸಂದರ್ಶನ ಪ್ರಕ್ರಿಯೆಯಲ್ಲಿ  ಆಯ್ಕೆಯಾಗಿದ್ದಾರೆ.

error: Content is protected !!