ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಹಂಚಿಕೆ

ದಾವಣಗೆರೆ, ಏ. 12 – ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಎನ್.ಎಫ್.ಎಸ್.ಎ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಒಂದು ವರ್ಷದ ಅವಧಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುವುದರೊಂದಿಗೆ, ಹೆಚ್ಚುವರಿಯಾಗಿ 1 ಕೆ.ಜಿ ಅಕ್ಕಿಯನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ ವಿತರಿಸಲಾಗುತ್ತದೆ.

ಅಂತ್ಯೋದಯ ಪಡಿತರ ಚೀಟಿ (ಎ.ಎ.ವೈ) ಹೊಂದಿದವರಿಗೆ ಪ್ರತಿ ಕಾರ್ಡಿಗೆ 21 ಕೆ.ಜಿ ಅಕ್ಕಿ, 14 ಕೆ.ಜಿ ರಾಗಿ ಸೇರಿದಂತೆ ಒಟ್ಟು 35 ಕೆ.ಜಿ ಆಹಾರಧಾನ್ಯ, ಆದ್ಯತಾ ಪಡಿತರ ಚೀಟಿ (ಪಿ.ಹೆಚ್.ಹೆಚ್/ಬಿ.ಪಿ.ಎಲ್) ಹೊಂದಿದ ಪ್ರತಿ ಸದಸ್ಯರಿಗೆ 4 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ ಸೇರಿದಂತೆ ಒಟ್ಟು 6 ಕೆ.ಜಿ ಆಹಾರ ಧಾನ್ಯ ಹಾಗೂ 1 ಕೆ.ಜಿ ಗೆ ರೂ. 15 ರಂತೆ ಒಪ್ಪಿಗೆ ನೀಡಿದ ಏಕ ಸದಸ್ಯ ಎ.ಪಿ.ಎಲ್ ಪಡಿತರ ಚೀಟಿಗಳಿಗೆ  5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿದ ಪಡಿತರ ಚೀಟಿಗಳಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಅಂತರ್ ರಾಜ್ಯ/ಜಿಲ್ಲೆ  ಪೋರ್ಟಿಬಿಲಿಟಿ ಜಾರಿಯಲ್ಲಿ ಇರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯಲು ಅವಕಾಶವಿದೆ.

ಮೇಲ್ಕಂಡ ವಿವಿಧ ವರ್ಗದ ಪಡಿತರ ಚೀಟಿದಾರರು  ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ/ಆಧಾರ್ ಆಧರಿತ ಧೃಡೀಕರಣ ಓ.ಟಿ.ಪಿ ಮೂಲಕ ಪಡಿತರ ಆಹಾರ ಧಾನ್ಯ ಪಡೆಯಲು ಜಿಲ್ಲಾ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!