ನಗರದಲ್ಲಿ ಇಂದಿನಿಂದ ಮಕ್ಕಳಿಗೆ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ

ಅಂತರ ರಾಷ್ಟ್ರೀಯ ಅಧ್ಯಾತ್ಮಿಕ ಸೇವಾ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಉಚಿತ ವ್ಯಕ್ತಿತ್ವ ವಿಕಸನ ಶಿಬಿರವನ್ನು ಇಂದಿನಿಂದ ಇದೇ ದಿನಾಂಕ 20ರವರೆಗೆ ಹಮ್ಮಿಕೊಳ್ಳಲಾಗಿದೆ.

ನಗರದ ಶ್ರೀ ಡಿ. ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್‌ನಲ್ಲಿರುವ ಶಿವ ಧ್ಯಾನ ಮಂದಿರದಲ್ಲಿ ಏರ್ಪಾಡಾಗಿರುವ ಈ ಶಿಬಿರದಲ್ಲಿ 7ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಭಾಗವಹಿಸಬಹುದು ಎಂದು ಸಂಸ್ಥೆಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ತಿಳಿಸಿದ್ದಾರೆ.

ಶಿಬಿರವು ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಶಿಬಿರಾರ್ಥಿಗಳಿಗೆ ಉಚಿತ ನೋಟ್ ಬುಕ್, ಪೆನ್ ನೀಡಲಾಗುತ್ತದೆ. ಆಸಕ್ತರು ದೂರವಾಣಿ 08192- 2555575ಕ್ಕೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.

error: Content is protected !!