ದಾವಣಗೆರೆ, ಏ.13- ರಾಷ್ಟ್ರೀಯ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಕರ್ನಾಟಕ ಭೀಮ್ ಸೇನೆ ಜಿಲ್ಲಾ ಸಮಿತಿ ವತಿಯಿಂದ ನಾಳೆ ದಿನಾಂಕ 14 ರ ಶುಕ್ರವಾರ ನಗರದ ಪ್ರಮುಖ ವೃತ್ತ ಹಾಗೂ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿ ಆಚರಿಸಲು ಉದ್ದೇಶಿಸಲಾಗಿದ್ದು, ವಿವಿಧ ಸಂಘಟನೆಗಳ ಮುಖಂಡರು ಸಹಕರಿಸುವಂತೆ ಸೇನೆ ಜಿಲ್ಲಾಧ್ಯಕ್ಷ ಸೂರ್ಯಪ್ರಕಾಶ್ ಆರ್. ಮನವಿ ಮಾಡಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಯಿಂದ 9.30 ರವರೆಗೆ ನಗರದ ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಗಾಂಧೀ ವೃತ್ತ, ಪಿ.ಬಿ ರಸ್ತೆ, ಎವಿಕೆ ಕಾಲೇಜ್ ರಸ್ತೆ, ನಾಯಕರ ಹಾಸ್ಟೆಲ್ ರಸ್ತೆ ಮಾರ್ಗವಾಗಿ ಸಂಚರಿಸಿ ಅಂಬೇಡ್ಕರ್ ಭಾವಚಿತ್ರದೊಂದಿಗೆ, ಮಂಗಳಮುಖಿ ಯರು, ದಮನಿತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿ ಗಳು, ಮುಖಂಡರುಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂತೋಷ್ ಎಂ, ರಮೇಶ್ ಆರ್, ರಾಘವೇಂದ್ರ ಕೆ ಮತ್ತಿತರರಿದ್ದರು.