ದಾವಣಗೆರೆ, ಏ.13- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಇದೇ ದಿನಾಂಕ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್ನೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ 27ರಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-234849ಕ್ಕೆ ಸಂಪರ್ಕಿಸಬಹುದು.
January 17, 2025