ಶಾಮನೂರು ರಸ್ತೆಯಲ್ಲಿರುವ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಮುಂಜಾನೆ ಶ್ರೀಸ್ವಾಮಿಗೆ ರುದ್ರಾಭಿಷೇಕ, 7ಕ್ಕೆ ಮಹಾರಾಜಪೇಟೆಯಿಂದ ಗುಗ್ಗಳದ ನಂತರ ಕೆಂಡಾದರ್ಚನೆ ದೇವಸ್ಥಾನದಲ್ಲಿ ನಡೆಯಲಿದೆ. ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು ಎಂದು ಸೇವಾ ಟ್ರಸ್ಟ್ ಕಮಿಟಿ ಶ್ರೀ ವೀರಯ್ಯ ಸ್ವಾಮಿ ತಿಳಿಸಿದ್ದಾರೆ.
January 19, 2025