ದಾವಣಗೆರೆ, ಏ. 18- ಎಸ್ಸೆಸ್ಸೆಲ್ಸಿ ಮೌಲ್ಯಮಾಪನವು ಇಂದಿನಿಂದ ನಗರದ 7 ಕೇಂದ್ರಗಳಲ್ಲಿ ನಡೆಯುತ್ತಿದ್ದು, ಆ ಎಲ್ಲಾ ಕೇಂದ್ರಗಳ ಸುತ್ತಮುತ್ತ 144 ನೇ ಸೆಕ್ಷನ್ ಅನ್ವಯ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.
ಈ ಆದೇಶವು ಮೌಲ್ಯಮಾಪನ ಮುಕ್ತಾಯವಾಗುವವರೆಗೆ ಜಾರಿಯಲ್ಲಿ ರುತ್ತದೆ. ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ.ಪೂ. ಕಾಲೇಜು, ಅಥಣಿ ಪ್ರೌಢಶಾಲೆ, ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗ, ಡಿ.ಆರ್.ಆರ್.ಪ್ರೌಢಶಾಲೆ, ಶ್ರೀ ಸೋಮೇಶ್ವರ ವಿದ್ಯಾಲಯ, ಶ್ರೀ ಮಾಗನೂರು ಬಸಪ್ಪ ಪ್ರೌಢಶಾಲೆ, ಬಾಪೂಜಿ ಪ್ರೌಢಶಾಲೆಗಳಲ್ಲಿ ಪರೀಕ್ಷಾ ಮೌಲ್ಯಮಾಪನ ನಡೆಯುತ್ತಿದೆ.