ದಾವಣಗೆರೆ, ಏ.18- ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 6 ನೇ ತರಗತಿ ವ್ಯಾಸಂಗ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿ ಗಳಿಗೆ ಶೇ. 25 ರಷ್ಟು ಪ್ರವೇಶ ನೀಡಲಾಗುತ್ತದೆ. ಅರ್ಜಿಗಳನ್ನು ಆಯಾ ವಸತಿ ಶಾಲೆಗಳಲ್ಲಿ ಪಡೆದು ಮೇ 10 ರೊಳಗಾಗಿ ವಸತಿ ಶಾಲೆಗಳಿಗೆ ಸಲ್ಲಿಸಬೇಕು.
February 24, 2025