ಹರಿಹರ, ಏ. 21 – ಬಸವೇಶ್ವರ ಜಯಂತಿ ಅಂಗವಾಗಿ ನಗರದ ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 23 ರ ಭಾನುವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಬಸವೇಶ್ವರ ಸ್ವಾಮಿಗೆ ಮತ್ತು ಉತ್ಸವ ಮೂರ್ತಿಗೆ ಅಭಿಷೇಕ, ಅಲಂಕಾರ ಮಹಾಮಂಗಳಾರತಿ ಸೇರಿದಂತೆ ವಿವಿಧ ರೀತಿಯ ಪೂಜಾ ಕಾರ್ಯಗಳು ನಡೆಯಲಿವೆ. ನಂತರ 8-30 ಕ್ಕೆ ಉತ್ಸವ ಮೂರ್ತಿಯನ್ನು ಮತ್ತು ಎತ್ತಿನ ಮೆರವಣಿಗೆ ನಡೆಯಲಿದೆ. ಅಂದು ರೈತರು ಎತ್ತುಗಳನ್ನು ಶೃಂಗಾರ ಮಾಡಿಕೊಂಡು ಮೆರವಣಿಗೆಗೆ ತರುವಂತೆ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಟಿ.ಜೆ. ಮುರುಗೇಶಪ್ಪ ಮನವಿ ಮಾಡಿಕೊಂಡಿದ್ದಾರೆ.
January 16, 2025