ಬಾಪೂಜಿ ವಿದ್ಯಾಸಂಸ್ಥೆಯ ಎ.ಆರ್.ಜಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.30ಕ್ಕೆ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಯುವ ರೆಡ್ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜೀವ ರಕ್ಷಣೆ ಕುರಿತು ಪ್ರಾತ್ಯಕ್ಷಿತೆ ಮತ್ತು ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಯಾಗಿ ಹೆಲ್ಪ್ಲೈನ್ ಸುಭಾನ್ ನದಾಫ್ ಅವರು ಭಾಗವಹಿಸಿ ಉಪನ್ಯಾಸ ನೀಡಲಿದ್ದು, ಪ್ರಾಂಶುಪಾಲ ಡಾ. ಜಿ.ಬಿ.ಬೋರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ಹೆಚ್.ಆರ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.