ದಾವಣಗೆರೆ, ಮೇ 10- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಕಾರ್ಯಕ್ರಮಗಳಿಗೆ ಅಪಾರ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಒಲವು ತೋರಿದ್ದಾರೆ ಎಂದರು.
ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆ ಪೈಪೋಟಿ ಇದ್ದರೂ ಸಹ ಗೆಲುವು ನಿಶ್ಚಿತ ಹಾಗೆಯೇ ದಕ್ಷಿಣದಲ್ಲಿ 10 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ. ರಾಜ್ಯದಲ್ಲಿ 125 ಕ್ಕೂ ಹೆಚ್ಚು ಸ್ಥಾನಗಳು ಬಿಜೆಪಿಗೆ ಲಭಿಸಲಿವೆ ಎಂದು ಹೇಳಿದರು.