ದಾವಣಗೆರೆ, ಮೇ 10- ರಾಜ್ಯ ಮತ್ತು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕದ ಅಭಿವೃದ್ಧಿ ದೃಷ್ಠಿಯಿಂದ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಶಿರಮಗೊಂಡನಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಆಡಳಿತದಲ್ಲಿ ದೇಶ ಮತ್ತು ರಾಜ್ಯದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಕೆಲಸಗಳು ಆಗಿವೆ. ಜನಪರ ಯೋಜನೆಗಳನ್ನು ರೂಪಿಸಲಾಗಿದ್ದು, ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಅಧಿಕ ಬಹುಮತದಿಂದ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದರು.