ದಾವಣಗೆರೆ, ಮೇ 12- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಥಮ ಭಾಷೆ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳಿಗೆ ದಾವಣಗೆರೆ ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 120, 121, 122, 123, 124 ಅಂಕ ಪಡೆದ ಮಕ್ಕಳಿಗೆ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ `ಕನ್ನಡ ಕುವರ-ಕುವರಿ’ ಜಿಲ್ಲಾ ಪ್ರಶಸ್ತಿ, 125 ಕ್ಕೆ 125 ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ `ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿ, ಒಟ್ಟು ಅಂಕ 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ `ಸರಸ್ವತಿ ಪುರಸ್ಕಾರ’ ರಾಜ್ಯ ಪ್ರಶಸ್ತಿಗಳನ್ನು ವಿತರಿಸಲಾಗು ವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ.
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, # 588, `ಕನ್ನಡ ಕೃಪಾ’, ಕುವೆಂಪು ರಸ್ತೆ, ಕಸ್ತೂರ್ಬಾ ಬಡಾವಣೆ, ದಾವಣಗೆರೆ – 577002. ಮೊಬೈಲ್ ಸಂಖ್ಯೆ : 9538732777, 9743897578, 9844691391 ಕ್ಕೆ ಸಂಪರ್ಕಿಸಬಹುದು ಎಂದು ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ತಿಳಿಸಿದ್ದಾರೆ.