ದಾವಣಗೆರೆ, ಮೇ 12- ನಗರದ ಸೇಂಟ್ ಜಾನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯು 2022-23 ನೇ ಸಾಲಿನ ಎಐಎಸ್ಎಸ್ಇ (ಸಿಬಿಎಸ್ಇ) ಪರೀಕ್ಷೆಯಲ್ಲಿ ಶೇ. 99 ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 69 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 46 ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದಾರೆ. ಕು. ಭೂಮಿಕ ಎಲ್. ಶೇ. 96ರಷ್ಟು ಫಲಿತಾಂಶ ಪಡೆದು ಶಾಲೆಗೆ ಪ್ರಥಮರಾಗಿ ಹೊರಹೊಮ್ಮಿದ್ದಾರೆ.
ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.