ಬೆಂಗಳೂರು, ಮೇ 14- ಹರಪನಹಳ್ಳಿ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಲತಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಪುತ್ರಿಯಾಗಿರುವ ಲತಾ, ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕಿಳಿದಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಲತಾ ಮಲ್ಲಿಕಾರ್ಜುನ್ ಅವರು ತಮ್ಮ ಸೈದ್ಧಾಂತಿಕ ಬೇರುಗಳು ಹಾಗೂ ಕಾಂಗ್ರೆಸ್ ವಿಚಾರಧಾರೆಯ ಬದ್ಧತೆಯಿಂದ ಬೇಷರತ್ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
January 10, 2025