ದಾವಣಗೆರೆ, ಮೇ 14- ಕರ್ನಾಟಕ ವಿಶ್ವವಿದ್ಯಾನಿಲಯದ ಮಾನವಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಕೆ.ಜಿ. ಗುರುಮೂರ್ತಿ ಅವರ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಗುರುಮೂರ್ತಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿರುವುದರ ಜೊತೆಗೆ, ಅನೇಕ ಶೈಕ್ಷಣಿಕ ಹಾಗು ಸಾಹಿತ್ಯಿಕ ಕೃತಿಗಳನ್ನು ರಚಿಸಿ, ಸಾಹಿತ್ಯ ಲೋಕವನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಗುರುಮೂರ್ತಿ ಹೇಳಿದ್ದಾರೆ.
ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಶ್ಯಾಗಲೆ ಗ್ರಾಮದಲ್ಲಿ ಜರುಗಿದ ದಾವಣಗೆರೆ ತಾಲ್ಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಲಾಗಿತ್ತು ಎಂದು ವಾಮದೇವಪ್ಪ ಅವರು ಗುರುಮೂರ್ತಿ ಅವರ ಸಾಧನೆಯನ್ನು ಸ್ಮರಿಸಿದ್ದಾರೆ.
ಡಾ.ಗುರುಮೂರ್ತಿ ಅವರ ನಿಧನಕ್ಕೆ ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ ಅವರು ಕಂಬನಿ ಮಿಡಿದಿದ್ದಾರೆ.