ಎಸ್ಸೆಸ್‌ಗೆ ಸ್ಥಾನ ಕೊಟ್ಟು ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಿ

ದಾವಣಗೆರೆ, ಮೇ 15- ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು, ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಗಳಿಸಿದ್ದು, ಪಕ್ಷದ ಹೈಕಮಾಂಡ್ ಇದನ್ನು ಪರಿಗಣಿಸಿ ಆರು ಬಾರಿ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪನವರನ್ನು ಅಥವಾ ನಾಲ್ಕು ಬಾರಿ ಶಾಸಕರಾಗಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಲಿಂಗಾಯತ ಸಮುದಾಯಕ್ಕೆ ಹಾಗೂ ಮಧ್ಯ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ.ಎಲ್.ಹರೀಶ್ ಬಸಾಪುರ ವಿನಂತಿಸಿದ್ದಾರೆ.

ಕಾಂಗ್ರೆಸ್ ಪಕ್ಷದ 135 ಶಾಸಕರ ಪೈಕಿ ಲಿಂಗಾಯತ ಸಮುದಾಯದ 39 ಶಾಸಕರು ಆಯ್ಕೆಯಾಗಿದ್ದು, ದಾವಣಗೆರೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ, ಚಿತ್ರದುರ್ಗ ಹಾಗೂ ಹಾವೇರಿ ಎರಡು ಜಿಲ್ಲೆಗಳ ತಲಾ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಪಕ್ಷ ಭರ್ಜರಿ ಜಯ ಗಳಿಸಿದ್ದು, ಶಾಮನೂರು ಶಿವಶಂಕರಪ್ಪ ಅವರನ್ನು ಅಥವಾ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಮಧ್ಯ ಕರ್ನಾಟಕಕ್ಕೆ, ಲಿಂಗಾಯತ ಸಮುದಾಯಕ್ಕೆ ಹಾಗೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಈ ಜಿಲ್ಲೆಯ ಮತದಾರರಿಗೆ ಗೌರವ ತೋರಿಸಿದಂತಾಗುತ್ತದೆ ಎಂದು ಪಕ್ಷದ ವರಿಷ್ಟರ ಗಮನ ಸೆಳದಿದ್ದಾರೆ.

error: Content is protected !!