ದಾವಣಗೆರೆ, ಮೇ 21- ನಿನ್ನೆ ನಡೆದ ನೂತನ ಸರ್ಕಾರ ರಚನೆ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಝಡ್. ಜಮೀರ್ ಅಹಮ್ಮದ್ ಖಾನ್ ಅವರು ಆಂಗ್ಲ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ರಾಜ್ಯದ ಕನ್ನಡಿಗರಿಗೆ ಅವಮಾನಿಸಿದ್ದಾರೆ. ಕನ್ನಡಿಗರ ಮತ ಪಡೆದು ಸಚಿವರಾಗಿ ಕನ್ನಡವನ್ನು ಅವಮಾನಿಸಿರುವುದು ದುರ್ದೈವದ ಸಂಗತಿ. ಈ ಕೂಡಲೇ ಸಚಿವ ಬಿ.ಝಡ್. ಜಮೀರ್ ಅಹಮ್ಮದ್ ಖಾನ್ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್ ಒತ್ತಾಯಿಸಿದ್ದಾರೆ.
January 11, 2025