29 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

ದಾವಣಗೆರೆ,  ಮೇ 21 –  ಸಾಮಾಜಿಕ ಭದ್ರತೆಗಾಗಿ ಉದ್ಯೋಗದಾತರು, ಉದ್ಯೋಗಿಗಳು ಹಾಗೂ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಹರಿಸುವ ಸಲುವಾಗಿ  ಇದೇ ದಿನಾಂಕ 29 ರಂದು ನಗರದ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಸಮುದಾಯ ಭವನದಲ್ಲಿ, ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಉದ್ಯೋಗದಾತರು ಹಾಗೂ ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ  2.30 ರಿಂದ ಸಂಜೆ 4ರ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

error: Content is protected !!