ಕೊಂಡಜ್ಜಿ : ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಿಹರ, ಮೇ 23-  ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದ ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಸಿ.ಬಿ.ಎಸ್.ಇ ಪಠ್ಯಕ್ರಮದ ಪಿ.ಸಿ.ಎಂ.ಬಿ ವಿಷಯಗಳನ್ನು ವ್ಯಾಸಂಗ ಮಾಡಲು 2023-24ನೇ ಸಾಲಿನ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿಗಳನ್ನು  ಆಹ್ವಾನಿಸಲಾಗಿದೆ.

ದಾಖಲಾತಿ ಪಡೆಯಲು ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಲಭ್ಯವಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇದೇ ದಿನಾಂಕ 25 ರೊಳಗಾಗಿ ಅರ್ಜಿ  ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  ಮೊ:9008815296 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು   ತಿಳಿಸಿದ್ದಾರೆ.

error: Content is protected !!