ದಾವಣಗೆರೆ, ಮೇ 28- ನಗರದ ಸರ್ಕಾರಿ ಸಂಸ್ಥೆ ಡಿಆರ್ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಇಂಜಿನಿಯರಿಂಗ್ ಮತ್ತು ಕಮರ್ಷಿಯಲ್ ಪ್ರಾಕ್ಟೀಸ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಪ್ರವೇಶಕ್ಕೆ ಈಗಾಗಲೇ ಆನ್ಲೈನ್ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು ಪ್ರವೇಶ ಪಡೆಯಲು ನಾಳೆ ದಿನಾಂಕ 29 ಕೊನೆ ದಿನವಾಗಿರುತ್ತದೆ. ಆನ್ಲೈನ್ ಮೂಲಕ ಹಂಚಿಕೆಯಾಗದ ಉಳಿದ ಸೀಟುಗಳಿಗೆ ಪ್ರವೇಶ ಪಡೆಯಲು ನಾಳೆ ಮಧ್ಯಾಹ್ನ 1 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ ಸಂಸ್ಥೆಯ ಪ್ರಾಚಾರ್ಯ ಡಾ. ಎ.ಎಂ ರವಿ ಮೊ: 6360713793, 8095667616 ಇವರನ್ನು ಸಂಪರ್ಕಿಸಿ.