ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ

ದಾವಣಗೆರೆ,  ಮೇ 28- ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯು ಜುಲೈ ಮಾಹೆ ಯಿಂದ ಆರಂಭಿಸುತ್ತಿರುವ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇ ಜ್‍ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸ ಲಾಗಿದೆ. ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದೇ ಇರುವ ಸಿಬ್ಬಂದಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸ ಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

error: Content is protected !!