ಜಿಎಂಐಟಿಯಲ್ಲಿ ಇಂದು – ನಾಳೆ `ಮಲ್ಲಿಕಾ-2023′ ಕ್ರೀಡಾ ಹಬ್ಬ

ದಾವಣಗೆರೆ, ಮೇ 28- ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ  ಜಿ.ಎಂ. ಮಲ್ಲಿಕಾರ್ಜುನಪ್ಪ ತೆರೆದ ಸಭಾಂಗಣದಲ್ಲಿ ನಾಳೆ ದಿನಾಂಕ 29 ಮತ್ತು 30 ರಂದು ಎರಡು ದಿನಗಳ ಕಾಲ `ಮಲ್ಲಿಕಾ-2023′ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ ಆಚರಿಸಲಾಗುವುದು ಎಂದು ಎಂಬಿಎ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್. ಬಸವರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾಳೆ ದಿನಾಂಕ 29 ರಂದು ಸಂಜೆ 5 ಕ್ಕೆ ಕಾಲೇಜಿನ ಸಭಾಂಗಣ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಶೈಲ ಎಜುಕೇಶನ್ ಟ್ರಸ್ಟ್ ಖಜಾಂಚಿ ಜಿ.ಎಸ್. ಅನಿತ್ ಕುಮಾರ್, ಹಾಸ್ಯ ನಟರಾದ ಸಂತೋಷ್, ಕುಂದಾಪುರ ಸೂರ್ಯ, ಸಂಗೀತ ನಿರ್ದೇಶಕ ವಿ. ಮನೋಹರ ವಿಶೇಷ ಅಹ್ವಾನಿತರಾಗಿ ಆಗಮಿಸಲಿದ್ದಾರೆ. 

ಶ್ರೀಶೈಲ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಜಿ.ಎಂ. ಲಿಂಗರಾಜ್ ಭಾಗವಹಿಸುವರು. ಪ್ರಾಚಾರ್ಯ ಡಾ. ಎಂ.ಬಿ. ಸಂಜಯ್ ಪಾಂಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ನಾಡಿದ್ದು ದಿನಾಂಕ 30 ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ, ನಟ, ಆರ್ಟ್ ನಿರ್ದೇಶಕ ಅರುಣ್ ಸಾಗರ್ ಆಗಮಿಸಲಿದ್ದು, ಶ್ರೀಶೈಲ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಜಿ.ಎಂ. ಲಿಂಗರಾಜ್ ಅಧ್ಯಕ್ಷತೆ ವಹಿಸುವರು. ಛೇರ್ಮನ್ ಜಿ.ಎಂ. ಪ್ರಸನ್ನಕುಮಾರ್, ಪ್ರಾಚಾರ್ಯ ಡಾ. ಸಂಜಯ್ ಪಾಂಡೆ ಖಜಾಂಚಿ ಜಿ.ಎಸ್. ಅನಿತ್ ಕುಮಾರ್ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ತೇಜಸ್ವಿ ಕಟ್ಟಿಮನಿ, ಪ್ರೊ.ಕೆ.ಎಸ್. ಓಂಕಾರಪ್ಪ ಉಪಸ್ಥಿತರಿದ್ದರು. 

error: Content is protected !!