ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಇಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ, ಬಿ.ಕೆ.ಪರಶುರಾಮ್, ಮೇಯರ್ ವಿನಾಯಕ್ ಪೈಲ್ವಾನ್ ಭಾಗವಹಿಸುವರೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.